ಕೀರ್ತನೆಗಳು 31:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಕೆಯುಳ್ಳ ದೇವರೇ, ನನ್ನನ್ನು ವಿಮೋಚಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ. ಅಧ್ಯಾಯವನ್ನು ನೋಡಿ |