Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣುಗುಡ್ಡು ಸೇದಿಕೊಂಡಿದೆ; ದೇಹಾತ್ಮಗಳು ಕುಗ್ಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:9
19 ತಿಳಿವುಗಳ ಹೋಲಿಕೆ  

ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.


ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.


ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.


ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.


ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.


ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.


ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.


ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.


ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು.


ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.


ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು