Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:2
7 ತಿಳಿವುಗಳ ಹೋಲಿಕೆ  

ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.


ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು