Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:7
18 ತಿಳಿವುಗಳ ಹೋಲಿಕೆ  

ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.


ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.


ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.


ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.


ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.


ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು