Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ I ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಪರಲೋಕದಿಂದ ಮನುಷ್ಯರನ್ನು ದೃಷ್ಟಿಸಿ ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪರಲೋಕದಿಂದ ಯೆಹೋವ ದೇವರು ದೃಷ್ಟಿಸಿ, ಮಾನವರೆಲ್ಲರನ್ನೂ ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:13
13 ತಿಳಿವುಗಳ ಹೋಲಿಕೆ  

ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,


“ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.


ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.


ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.


ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು