Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರ ಹೃದಯಗಳನು ನಿರ್ಮಿಸಿದಾತನವನು I ಅವರವರ ಕೃತ್ಯಗಳನು ಪರೀಕ್ಷಿಸುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ. ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಲ್ಲರ ಹೃದಯಗಳನ್ನು ರೂಪಿಸುವವರು ದೇವರೇ, ಜನರು ಮಾಡುವ ಕೆಲಸಗಳನ್ನೆಲ್ಲಾ ಗಮನಿಸುವವರೂ ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:15
14 ತಿಳಿವುಗಳ ಹೋಲಿಕೆ  

ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.


ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ.


“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?


ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.


ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.


ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು