ಕೀರ್ತನೆಗಳು 33:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ. ಅಧ್ಯಾಯವನ್ನು ನೋಡಿ |
ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.