Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಮೇಲಿಗೂ ಕಡಿಮೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಿಂಹಗಳು ಹಸಿದು ಬಳಲಬಹುದು, ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:10
11 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.


ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.


ಯೆಹೋವನು ನನಗೆ ಕುರುಬನು; ಕೊರತೆಪಡೆನು.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.


ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.


ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.


ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು