Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:6
10 ತಿಳಿವುಗಳ ಹೋಲಿಕೆ  

ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:


ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.


ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು