Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:26
18 ತಿಳಿವುಗಳ ಹೋಲಿಕೆ  

“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”


ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ?


ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.


ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.


ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.


ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.


ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.


ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.


ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು