Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:1
22 ತಿಳಿವುಗಳ ಹೋಲಿಕೆ  

ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.


ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.


ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.


ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು