Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:6
29 ತಿಳಿವುಗಳ ಹೋಲಿಕೆ  

ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?


ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.


ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.


ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.


ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.


ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.


ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು