Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಟ್ಟ ನಡತೆಯುಳ್ಳವರನ್ನು ನೋಡಿ ಉರಿಗೊಳ್ಳಬೇಡ; ದುರಾಚಾರಿಗಳಿಗೋಸ್ಕರ ಹೊಟ್ಟೆಕಿಚ್ಚು ಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚುಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಟ್ಟವರನ್ನು ನೋಡಿ ಕೋಪಿಸಿಕೊಳ್ಳಬೇಡ. ಇಲ್ಲವೆ ಅಕ್ರಮ ಮಾಡುವವರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:1
12 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.


ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.


ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.


ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.


ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.


ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.


ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು