Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದುಷ್ಟನು ಸಾಲ ಮಾಡಿ ಹಿಂದಿರುಗಿ ಕೊಡದೆ ಹೋಗುವನು. ಆದರೆ ನೀತಿವಂತನು ಧಾರಾಳವಾಗಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:21
18 ತಿಳಿವುಗಳ ಹೋಲಿಕೆ  

ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.


ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು