Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸಜ್ಜನ ದಿಕ್ಕಿಲ್ಲದಿರುವುದನು, ಅವನ ಸಂತತಿ ಭಿಕ್ಷೆ ಬೇಡುವುದನು I ನಾ ಕಾಣೆನು, ವೃದ್ಧ ನಾನೆಂದೂ ಕಾಣೆನು, ಬಾಲ್ಯದಿಂದ ಕಾಣೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವದನ್ನಾಗಲಿ ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವದನ್ನಾಗಲಿ ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟದ್ದನ್ನಾಗಲಿ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಟ್ಟಿರುವುದನ್ನಾಗಲಿ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆ ಬೇಡುವುದನ್ನಾಗಲಿ ಎಂದೂ ನಾನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:25
22 ತಿಳಿವುಗಳ ಹೋಲಿಕೆ  

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು.


ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.


ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.


‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.


ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.


ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.


ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥರು ಅಳಿದು ಹೋದದ್ದೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು