Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:37
9 ತಿಳಿವುಗಳ ಹೋಲಿಕೆ  

ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು