Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೋಪವನ್ನು ಅಣಗಿಸಿಕೋ; ರೋಷವನ್ನು ಬಿಡು. ಉರಿಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೋಪದಿಂದಿರಬೇಡ! ರೋಷದಿಂದಿರಬೇಡ! ಉರಿಗೊಳ್ಳಬೇಡ! ಅವು ನಿನ್ನನ್ನು ಕೆಡುಕಿಗೆ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:8
18 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.


“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.


ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು.


ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.


ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ?


ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.


ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.


“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.


ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು