Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದುಷ್ಟರಾದರೋ ನಾಶವಾಗುವರು. ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು; ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:9
17 ತಿಳಿವುಗಳ ಹೋಲಿಕೆ  

ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.


ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”


ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.


ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು