Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಶತ್ರುಗಳು ಚುರುಕಾದವರೂ ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹುಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ. ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:19
11 ತಿಳಿವುಗಳ ಹೋಲಿಕೆ  

ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.


ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.


ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.


ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು