Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 39:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಾಕು ಮಾಡು ನಿನ್ನ ಕೈ ಹೊಡೆತವನು I ಅದರಿಂದ ನಾ ಸಾಯುತ್ತಿರುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ದಂಡನೆಯನ್ನು ಪರಿಹರಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 39:10
10 ತಿಳಿವುಗಳ ಹೋಲಿಕೆ  

ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ.


ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ


ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.


ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು