Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 39:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಬಿಟ್ಟುಹೋಗಿ ಇಲ್ಲವಾಗುವದಕ್ಕಿಂತ ಮುಂಚೆ ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ ನಿಮ್ಮ ಕೋಪದ ದೃಷ್ಟಿಯನ್ನು ಬೇರೆ ಕಡೆ ತಿರುಗಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 39:13
12 ತಿಳಿವುಗಳ ಹೋಲಿಕೆ  

ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ?


ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.


ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.


ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.


“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.


“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.


ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು