Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 39:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಂತಿರಲು ಪ್ರಭು, ನಾನೇತಕೆ ಕಾದಿರಬೇಕು? I ನೀನೆ ಅಲ್ಲವೆ ನನಗೆ ನಂಬಿಕೆ, ಇದು ಸಾಕು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲಾಗಿ ಕರ್ತನೇ, ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು? ನನ್ನ ನಿರೀಕ್ಷೆಯು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು? ನನ್ನ ನಿರೀಕ್ಷೆ ನಿಮ್ಮಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 39:7
12 ತಿಳಿವುಗಳ ಹೋಲಿಕೆ  

ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.


ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.


ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, ನಿರೀಕ್ಷಿಸುತ್ತಾ ಇದ್ದೇನೆ, ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.


ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.


ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.


ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು