Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಇಕ್ಕಟ್ಟಿನಿಂದ ಬಿಡಿಸಿ ಇಂಬಾದ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಅಂಗೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:1
35 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.


ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?


ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.


ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,


ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.


ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.


ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.


ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.


ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.


ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.


ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.


ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.


ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು