ಕೀರ್ತನೆಗಳು 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ನಿರ್ಭಯವಾಗಿರುವದರಿಂದ ಮಲಗಿಕೊಂಡು ಕೂಡಲೆ ನಿದ್ದೆ ಮಾಡುವೆನು; ಯಾಕಂದರೆ ಯೆಹೋವನೇ, ನಾನು ಯಾವ ಅಪಾಯವೂ ಇಲ್ಲದೆ ಸುರಕ್ಷಿತನಾಗಿರುವಂತೆ ನೀನು ಕಾಪಾಡುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ. ಅಧ್ಯಾಯವನ್ನು ನೋಡಿ |