ಕೀರ್ತನೆಗಳು 40:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ನೀತಿಸಾಧನೆಯನ್ನು ಮರೆಮಾಜಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ. ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡದೆ ಸಾರಿದೆನು. ಅಧ್ಯಾಯವನ್ನು ನೋಡಿ |