ಕೀರ್ತನೆಗಳು 40:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನ ಕೊಲೆಗೆಂದು ಯತ್ನಿಸುವವರು ನಾಚಿ ಗಲಿಬಿಲಿಗೊಳ್ಳಲಿ I ನನ್ನಳಿವನು ಕೋರುವಂಥವರು ಲಜ್ಜೆಯಿಂದ ಹಿಂದಿರುಗಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನ ಪ್ರಾಣವನ್ನು ತೆಗೆಯುವದಕ್ಕೆ ಸಮಯ ನೋಡುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ. ಅಧ್ಯಾಯವನ್ನು ನೋಡಿ |