Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನೇ, ಅವನನ್ನು ಶತ್ರುಗಳ ಅಧೀನಕ್ಕೆ ಕೊಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:2
16 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.


ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.


ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.


ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು