ಕೀರ್ತನೆಗಳು 42:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು. ಅಧ್ಯಾಯವನ್ನು ನೋಡಿ |