Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:7
10 ತಿಳಿವುಗಳ ಹೋಲಿಕೆ  

ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು


ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದಿ. ಸೆಲಾ


ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.


ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.


ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.


ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು