ಕೀರ್ತನೆಗಳು 42:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ನನ್ನ ಶರಣನಿಗೆ - ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು ಎಂದು ಮೊರೆಯಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಪೀಡಿತನಾಗಿ ದುಃಖದಲ್ಲಿ ಸಾಗಬೇಕು?” ಎಂದು ನನ್ನ ಶರಣನಾದ ದೇವರಿಗೆ ಮೊರೆಯಿಡುವೆನು. ಅಧ್ಯಾಯವನ್ನು ನೋಡಿ |