Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಿಲ್ಲುಬಾಣದಲಿ ನಾ ಭರವಸೆಯಿಡುವುದಿಲ್ಲ I ಕತ್ತಿ ಕಠಾರಿ ನನಗೆ ರಕ್ಷಣೆ ತರುವುದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಬಿಲ್ಲಿನಲ್ಲಿ ಭರವಸವಿಡುವದಿಲ್ಲ; ಕತ್ತಿಯು ನನ್ನನ್ನು ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಬಿಲ್ಲುಬಾಣಗಳಲ್ಲಿ ನಾನು ಭರವಸೆವಿಡುವುದಿಲ್ಲ. ನನ್ನ ಖಡ್ಗವು ನನ್ನನ್ನು ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನನ್ನ ಬಿಲ್ಲಿನಲ್ಲಿ ಭರವಸೆ ಇಡುವುದಿಲ್ಲ; ನನ್ನ ಖಡ್ಗವು ನನಗೆ ಜಯ ತರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:6
5 ತಿಳಿವುಗಳ ಹೋಲಿಕೆ  

ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು.


ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು