Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:1
23 ತಿಳಿವುಗಳ ಹೋಲಿಕೆ  

ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.


ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.


“ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.


ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.


ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.


ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.


ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು