Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜನಾಂಗಗಳನಾತ ನಮಗಧೀನಪಡಿಸಿಹನು I ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ ಪರಕುಲದವರನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:3
14 ತಿಳಿವುಗಳ ಹೋಲಿಕೆ  

ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.


ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.


ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.


ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.


ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು