ಕೀರ್ತನೆಗಳು 49:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು. ಅಧ್ಯಾಯವನ್ನು ನೋಡಿ |