Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜನಸಾಮಾನ್ಯರೆ, ಜನಾಧಿಪತಿಗಳೆ, ದರಿದ್ರರೆ, ಧನವಂತರೆ I ನೀವೆಲ್ಲರು ನನ್ನ ಮಾತುಗಳಿಗೆ ಕಿವಿಗೊಟ್ಟು ಆಲಿಸಿರೈ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಗಳೇ ಜನಾಧಿಪತಿಗಳೇ, ಬಡವರೇ ಬಲ್ಲಿದರೇ, ನೀವೆಲ್ಲರೂ ಒಂದಾಗಿ ಬಂದು ಆಲೈಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಾಮಾನ್ಯ ಜನರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:2
10 ತಿಳಿವುಗಳ ಹೋಲಿಕೆ  

ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.


ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು