Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:4
10 ತಿಳಿವುಗಳ ಹೋಲಿಕೆ  

ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.


ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.


ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.


ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.


“ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು