Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯಾವನಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದೆ ಶಾಶ್ವತವಾಗಿ ಬದುಕಿರುವದಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:7
10 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,


ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.


“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.


ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.


ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು