ಕೀರ್ತನೆಗಳು 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರೇ, ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದವರು; ಆದದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವದರಿಂದ ಅವರನ್ನು ದೊಬ್ಬಿಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿ |