ಕೀರ್ತನೆಗಳು 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವದು; ಉದಯಕಾಲದಲ್ಲಿಯೇ [ಪ್ರಾರ್ಥನೆಯನ್ನು] ಸಮರ್ಪಿಸಿ ಸದುತ್ತರವನ್ನು ಎದುರುನೋಡುತ್ತಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ; ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ, ಎದುರುನೋಡುತ್ತಾ ಕಾದುಕೊಂಡಿರುವೆನು. ಅಧ್ಯಾಯವನ್ನು ನೋಡಿ |