Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಚೋರರೊಡನೆ ಸಂತೋಷದಿಂದ ಸೇರುತ್ತೀರಿ; ಜಾರರ ಒಡನಾಟವೇ ನಿಮಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:18
14 ತಿಳಿವುಗಳ ಹೋಲಿಕೆ  

ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!


“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಆಗ ಯೋನಾದಾಬನು ಅವನಿಗೆ, “ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು