Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:22
21 ತಿಳಿವುಗಳ ಹೋಲಿಕೆ  

ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.


ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.


ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?


ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು