Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರ ಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:15
14 ತಿಳಿವುಗಳ ಹೋಲಿಕೆ  

ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”


ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.


ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”


ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?


ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.


ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು