Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:5
9 ತಿಳಿವುಗಳ ಹೋಲಿಕೆ  

ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.


ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.


ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು