Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 52:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಸುಳ್ಳನ್ನು ಸ್ಥಾಪಿಸುವದೇ ನಿನಗೆ ಸಂತೋಷ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 52:3
10 ತಿಳಿವುಗಳ ಹೋಲಿಕೆ  

ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,


ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.


ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ


ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು