Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 54:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 54:3
13 ತಿಳಿವುಗಳ ಹೋಲಿಕೆ  

ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.


ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.


ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.


ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.


ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು