Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೇ ದೇವಾ, ಕಿವಿಗೊಡು ನನ್ನ ಪ್ರಾರ್ಥನೆಗೆ I ವಿಮುಖನಾಗಬೇಡ ನನ್ನ ವಿಜ್ಞಾಪನೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ವಿಜ್ಞಾಪನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ, ನನ್ನ ವಿಜ್ಞಾಪನೆಗೆ ನಿಮ್ಮನ್ನು ಮರೆಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:1
16 ತಿಳಿವುಗಳ ಹೋಲಿಕೆ  

ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”


ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.


ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.


ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.


“ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. ಸೆಲಾ


ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?


ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.


ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.


ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು