Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ ಹೊಯ್ದಾಡುತ್ತಾ ನರಳುತ್ತೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ಆ ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:3
12 ತಿಳಿವುಗಳ ಹೋಲಿಕೆ  

ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.


ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.


“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.


ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ


ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


“ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.


ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು