Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನ ಹೃದಯವು ನೊಂದು ಬೆಂದಿದೆ I ಮರಣ ಭಯವು ಆವರಿಸಿಕೊಂಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ನೊಂದು ಬೆಂದದೆ; ಮರಣಭಯವು ಆವರಿಸಿಕೊಂಡದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಹೃದಯ ಬಡಿತವು ಮಿತಿಮೀರಿದೆ; ಮರಣ ಭಯವು ನನ್ನನ್ನು ಆವರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಹೃದಯವು ನನ್ನ ಅಂತರಂಗದಲ್ಲಿ ನೊಂದುಕೊಳ್ಳುತ್ತದೆ. ಮರಣದ ಬೆದರಿಕೆಗಳು ನನ್ನ ಮೇಲೆ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:4
14 ತಿಳಿವುಗಳ ಹೋಲಿಕೆ  

ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು.


ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.


ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?


ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?


ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,


ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು