Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಡುಗುತ್ತಿರುವೆ ಭಯದಿಂದ I ಕುಸಿಯುತ್ತಿರುವೆ ದಿಗಿಲಿನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಂಜಿ ನಡುಗುತ್ತೇನೆ; ದಿಗಿಲು ನನ್ನನ್ನು ಹಿಡಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಭಯದಿಂದ ನಡುಗುತ್ತಿದ್ದೇನೆ. ನಾನು ದಿಗಿಲುಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭಯವೂ ನಡುಗೂ ನನಗೆ ಬಂದಿವೆ; ಭೀತಿಯು ನನ್ನನ್ನು ಮುಚ್ಚಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:5
12 ತಿಳಿವುಗಳ ಹೋಲಿಕೆ  

ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.


ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.


ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.


ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.


ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.


ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.


ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು