Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಭ್ರಾಂತಗೊಳಿಸು ಶತ್ರುವನು, ಗಲಿಬಿಲಿಗೊಳಿಸು ಅವರ ನುಡಿಯನು I ನಗರದಲಿ ನಾ ಕಾಣುತ್ತಿರುವೆ ಪ್ರಭೂ, ಹಿಂಸೆ ಕಲಹವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನೇ, ಅವರ ಭಾಷೆಯನ್ನು ತಾರು ಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹಬಲಾತ್ಕಾರಗಳು ಕಾಣಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಒಡೆಯನೇ, ಅವರ ಸುಳ್ಳುಗಳನ್ನು ನಿಲ್ಲಿಸು. ಈ ಪಟ್ಟಣದಲ್ಲಿ ಹಿಂಸೆಕಲಹಗಳು ಕಾಣುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ. ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:9
8 ತಿಳಿವುಗಳ ಹೋಲಿಕೆ  

ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು